ಬೆಳಗಾವಿ: ನಿನ್ನೆಯಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದೆ. ಈ ನಡುವೆಯೇ ರಮೇಶ್ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತವಾಗಿರುವ ಘಟನೆ ನಡೆದಿದೆ.ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ ಎಂಬಾತನಿಗೆ ಚಾಕುದಿಂದ ಇರಿದಿದ್ದಾರೆ.
ಇನ್ನು ಎಂಎಲ್ಸಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳ್ಳಿ ಎಂಬಾತನಿಂದ ಈ ಕೃತ್ಯ ನಡೆದಿರುವ ಆರೋಪ ಕೇಳಿಬಂದಿದೆ.
ನಿನ್ನೆ ಸಂಜೆ ಪೃಥ್ವಿ ಸಿಂಗ್ ಮನೆಗೆ ನುಗ್ಗಿ ಆರೋಪಿಗಳು ಗಲಾಟೆ ನಡೆಸಿದ್ದಾರೆ. ನಂತರ ಚಾಕುವಿನಿಂದ ಹಲ್ಲೆಗೆ ಮುಂದಾಗಿರುವ ಆರೋಪ ಕೇಳಿಬಂದಿದೆ. ಸದ್ಯ ಪೃಥ್ವಿ ಸಿಂಗ್ಗೆ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಂದಹಾಗೆ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕರು ಆಸ್ಪತ್ರೆಗೆ ಬಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇತ್ತ, ಈ ಘಟನೆಗೆ ಸಂಬಂಧಿಸಿದಂತೆ ಚನ್ನರಾಜ್ ಪ್ರತಿಕ್ರಿಯೆ ನೀಡಿ, ಪೃಥ್ವಿಸಿಂಗ್ ಸುಳ್ಳು ಹೇಳುದರಲ್ಲಿ ಪಂಡಿತ. ಅವನೊಬ್ಬ ನಟೋರಿಯಸ್ ಫೆಲೋ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಕಿಡಿಕಾರಿದ್ದಾರೆ.