ಬೆಂಗಳೂರು ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದೀಗ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ಆದೇಶಿಸಲಾಗಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಹೆಚ್ಎಎಲ್ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ತನಿಖೆಯನ್ನು ಸಿಸಿಬಿಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ತನಿಖಾಧಿಕಾರಿಯಾಗಿ ಎಸಿಪಿ ನವೀನ್ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ.
ಶುಕ್ರವಾರ ಮಧ್ಯಾಹ್ನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಇದೀಗ ಕೆಫಿಯಲ್ಲಿ ಬಾಂಬ್ ಬಿಟ್ಟು ಹೋಗಿದ್ದ ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಶಂಕಿತನ ಹುಡುಕಾಟ ಮುಂದುವರೆದಿದೆ.