ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರನ್ನು ಎನ್ ಐಎ ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರುಕಿನಿಂದ ನಡೆಯುತ್ತಿದೆ. ಈ ಪ್ರಕರಣದಲ್ಲಿ ಬಾಂಬರ್ ಒಬ್ಬ ಅಲ್ಲ, ಇಬ್ಬರು ಎಂದು ತಿಳಿದುಬಂದಿತ್ತು. ಬಾಂಬರ್ ಜತೆಗೆ ಮತ್ತೊಬ್ಬ ಇದ್ದ. ಈ ಇಬ್ಬರು ಶಿವಮೊಗ್ಗದ ತೀರ್ಥಹಳ್ಳಿಯವರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.
ಇದೀಗ ಬಾಂಬರ್ ಜೊತೆಗೆ ನೇರ ಸಂಪರ್ಕದಲ್ಲಿದ್ದ ಬೆಂಗಳೂರು ಮೂಲದ ಇಬ್ಬರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸುತ್ತಿದೆ. ಬಂಧಿತ ಆರೋಪಿಗಳು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಾಂಬರ್ ಜೊತೆಗೆ ನೇರ ಸಂಪರ್ಕ ಹೊಂದಿದ್ದರು ಎಂಬ ಸಾಕ್ಷ್ಯ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.