ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಈಗ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದೆ.
ಮೂಲಗಳ ಮಾಹಿತಿ ಪ್ರಕಾರ ಈ ಬಾರಿ ಮಾಜಿ ಸಂಸದೆ, ನಟಿ ರಮ್ಯಾ ಅವರನ್ನೂ ಕಾಂಗ್ರೆಸ್ ಲೋಕಸಭಾ ಚುನಾವಣಾ ಕಣಕ್ಕೆ ಇಳಿಸುವ ನಿರೀಕ್ಷೆ ಇದೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಮ್ಯಾ ಅವರಿಗೆ ಟಿಕೆಟ್ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
ಬೆಂಗಳೂರು ದಕ್ಷಿಣ ದೀರ್ಘಕಾಲದಿಂದ ಬಿಜೆಪಿ ಹಿಡಿತದಲ್ಲಿದ್ದು, ಸದ್ಯ ತೇಜಸ್ವಿಸೂರ್ಯ ಅವರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಒಂದು ವೇಳೆ ರಮ್ಯಾ ಅವರಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್ ಕೊಟ್ಟರೆ ಆಗ ರಮ್ಯಾ ಮತ್ತು ತೇಜಸ್ವಿಸೂರ್ಯ ನಡುವೆ ಹಣಾಹಣಿ ನಡೆಯಲಿದೆ.
ಬೆಂಗಳೂರು ಉತ್ತರದಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಟಿಕೆಟ್ ಕೊಡುವ ಬಗ್ಗೆ ಮತ್ತು ಬೆಂಗಳೂರು ಕೇಂದ್ರದಿಂದ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.
ADVERTISEMENT
ADVERTISEMENT