ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುಪರೀಕ್ಷೆ ವಿಚಾರವಾಗಿ ಸರ್ಕಾರಕ್ಕೆ ಸ್ವಪಕ್ಷೀಯ ಶಾಸಕರಿಂದಲೇ ಇಕ್ಕಟ್ಟು ಶುರುವಾಗಿದೆ. ಮೊದಲು ಪರೀಕ್ಷೆ ರದ್ದತಿಗೆ ಬೆಂಬಲ ಸೂಚಿಸಿದ್ದ ಶಾಸಕರು ಇದೀಗ ಯೂಟರ್ನ್ ಹೊಡೆದಿದ್ದಾರೆ.
ಪರೀಕ್ಷೆ ರದ್ದುಗೊಳಿಸದಂತೆ ಅರ್ಹರಿಗೆ ಪೊಲೀಸ್ ನೇಮಕಾತಿಯ ಆದೇಶ ಪತ್ರ ನೀಡುವಂತೆ ಅಭ್ಯರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ, ಹೋರಾಟ ನಿರತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸುತ್ತಿರುವ ಶಾಸಕರು ಗೃಹ ಸಚಿವರಿಗೆ ಪತ್ರ ಬರೆದು ಮರು ಪರೀಕ್ಷೆ ಬೇಡ ಎಮದು ಒತ್ತಾಯಿಸುತ್ತಿದ್ದಾರೆ.
ಪರೀಕ್ಷೆ ಬದಲು ಪ್ರಾಮಾಣಿಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಪತ್ರ ನೀಡಬೇಕು ಎಂದು ಕಳೆದ ಗುರುವಾರ ಗೃಹ ಸಚಿವರಿಗೆ ಪತ್ರ ಬರೆದು ಶಾಸಕರು ಆಗ್ರಹಿಸಿದ್ದಾರೆ.
ಬಿಜೆಪಿ ಶಾಸಕರಾದ ಕುಡಚಿ ರಾಜೀವ್, ಸುನೀಲ್ ಬಿ ನಾಯ್ಕ್, ಹರೀಶ್ ಪೂಂಜಾ, ರಘುಪತಿ ಭಟ್, ರಾಜ್ಕುಮಾರ್ ಪಾಟೀಲ್ ತೇಲ್ಕೂರ್, ಲಾಲಾಜಿ ಮೆಂಡನ್ ಹಾಗೂ ಕಾಂಗ್ರೆಸ್ ನ ಜೆ ಗಣೇಶ್, ರಾಘವೇಂದ್ರ ಹಿಟ್ನಾಳ್ ಮತ್ತು ಜೆಡಿಎಸ್ನ ಲಿಂಗೇಶ್ ಅವರು ಗೃಹ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಸರ್ಕಾರ ಈಗಾಗಲೇ ಪಿಎಸ್ಐ ಮರು ಪರೀಕ್ಷೆ ನಡೆಸಲು ನಿರ್ಧರಿಸಿ ಆದೇಶಿಸಿದೆ. ಆದರೆ, ಇಂತಹ ಸಂದರ್ಭದಲ್ಲಿ ಬಿಜೆಪಿ ಶಾಸಕರ ಪತ್ರದಿಂದ ಸರ್ಕಾರ ಮುಜುಗರಕ್ಕೊಳಗಾಗಿದೆ.