ADVERTISEMENT
ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು. ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ಸಮಗ್ರತೆ, ಏಕತೆಯನ್ನ ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನ ಹೊಂದಿದೆ. ಸರ್ಕಾರವು 5 ಗ್ಯಾರೆಂಟಿಗಳನ್ನ ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಎಲ್ಲ ಐದು ಗ್ಯಾರೆಂಟಿಗಳನ್ನ ಅನುಷ್ಠಾನಗೊಳಿಸಲಾಗಿದೆ. ಶಕ್ತಿ & ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಮಾಸಿಕ ರೂ,2,000 ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.
ADVERTISEMENT