ಆಮ್ ಆದ್ಮಿ ಪಕ್ಷದ (Aam Admi Party) ಮಾನ್ಯತೆಯನ್ನು ರದ್ದು ಮಾಡಲು ಕೋರಿ 56 ಮಂದಿ ನಿವೃತ್ತ ಐಎಎಸ್, ಐಎಫ್ಎಸ್, ಐಪಿಎಸ್ ಮತ್ತು ಐಆರ್ಎಸ್ ಅಧಿಕಾರಿಗಳು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಿಗೆ ಗುರುವಾರ ಪತ್ರ ಬರೆದಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಅಧಿಕಾರಿಗಳನ್ನು ಗುಜರಾತ್ ಚುನಾವಣೆಯಲ್ಲಿ ತನ್ನ ಪರವಾಗಿ ಕೆಲಸ ಮಾಡಿಸಿಕೊಳ್ಳಲು ಆಮ್ ಆದ್ಮಿ ಪಕ್ಷ (ಎಎಪಿ) ಪ್ರಚೋದಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ಪತ್ರಕ್ಕೆ ಕರ್ನಾಟಕದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ. ಮದನ್ ಗೋಪಾಲ್, ಕೇರಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಆನಂದ್ ಬೋಸ್, ನಿವೃತ್ತ ರಾಯಭಾರಿ ನಿರಂಜನ್ ದೇಸಾಯಿ ಮತ್ತು ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಉಮೇಶ್ ಕುಮಾರ್ ಸೇರಿದಂತೆ ಹಲವರು ಸಹಿ ಮಾಡಿದ್ದಾರೆ. ಇದನ್ನೂ ಓದಿ : ಹಾಸ್ಯ ನಟ ಟೆನ್ನಿಸ್ ಕೃಷ್ಣ ಎಎಪಿ ಪಕ್ಷಕ್ಕೆ ಸೇರ್ಪಡೆ
ಸೆಪ್ಟೆಂಬರ್ 3 ರಂದು ರಾಜ್ಕೋಟ್ನಲ್ಲಿ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನಡೆಸಿದ ಪತ್ರಿಕಾಗೋಷ್ಠಿ, ಅದರಲ್ಲಿ ಅವರು ಆಡಿದ್ದ ಮಾತುಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮಾದರಿ ನೀತಿ ಸಂಹಿತೆಯನ್ನು ಎಎಪಿ ಉಲ್ಲಂಘಿಸಿದೆ. ಪ್ರಜಾಪ್ರತಿನಿಧಿ ಕಾಯಿದೆ– 1951 ರ ನಿಬಂಧನೆಗಳ ಉಲ್ಲಂಘನೆಯಾಗಿರುವುದರಿಂದ ಆಮ್ ಆದ್ಮಿ (Aam Admi Party) ಪಕ್ಷದ ಮಾನ್ಯತೆಯನ್ನು ರದ್ದು ಮಾಡಬೇಕು ಎಂದು ನಿವೃತ್ತ ಅಧಿಕಾರಿಗಳು ಒತ್ತಾಯಿಸಿದರು. ಇದನ್ನೂ ಓದಿ : ರೈತ ಸಂಘದಿಂದ ಕೋಡಿಹಳ್ಳಿ ಉಚ್ಛಾಟನೆ – ಆಮ್ ಆದ್ಮಿ ಪಾರ್ಟಿಗೆ ಭಾರೀ ಮುಜುಗರ