ನಾಳೆಯಿಂದ ಸಿಡ್ನಿಯಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಕಡೆಯ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡಲ್ಲ.
ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಬಗ್ಗೆ ನಾಯಕ ರೋಹಿತ್ ಶರ್ಮಾ ಅವರು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಮತ್ತು ತರಬೇತುದಾರ ಗೌತಮ್ ಗಂಭೀರ್ ಅವರಿಗೆ ಮಾಹಿತಿ ನೀಡಿದ್ದಾರೆ. ರೋಹಿತ್ ನಿರ್ಧಾರವನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ.
ಸಿಡ್ನಿ ಟೆಸ್ಟ್ನಿಂದ ಸ್ವಯಂಪ್ರೇರಿತರಾಗಿ ಹೊರಗುಳಿಯುವುದಕ್ಕೆ ರೋಹಿತ್ ಶರ್ಮಾ ನಿರ್ಧರಿಸಿರುವ ಕಾರಣ ವೇಗಿ ಜಸ್ಪ್ರೀತ್ ಬೂಮ್ರಾ ಅವರು ಸಿಡ್ನಿ ಟೆಸ್ಟ್ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.
ಮೆಲ್ಬೋರ್ನ್ ಟೆಸ್ಟ್ನಲ್ಲಿ ಟೀಂ ಇಂಡಿಯಾದಲ್ಲಿ ಜಾಗ ಸಿಗದ ಶುಭ್ಮನ್ ಗಿಲ್ ನಾಳೆ ಸಿಡ್ನಿ ಟೆಸ್ಟ್ನಲ್ಲಿ ರೋಹಿತ್ ಶರ್ಮಾ ಬದಲಿಗೆ ಕಣಕ್ಕಿಳಿಯಲಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಿರುವ ಕೆ ಎಲ್ ರಾಹುಲ್ ಅವರು ಯಶಸ್ವಿ ಜೈಸ್ವಾಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
ಇತ್ತ ಗಾಯಗೊಂಡಿರುವ ಆಕಾಶ್ ದೀಪ್ ಬದಲಿಗೆ ಕನ್ನಡಿಗ ಪ್ರಸಿಧ್ ಕೃಷ್ಣ ಅವರು ಆಡಲಿದ್ದಾರೆ.,
ADVERTISEMENT
ADVERTISEMENT