ಕಾಂಗ್ರೆಸ್ನ ಮಾಜಿ ಶಾಸಕ, ಐಎಂಎ ವಂಚನೆಯ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮುಸ್ಲಿಂ ನಾಯಕ ರೋಷನ್ ಬೇಗ್ ಅವರು ಇಂದು ಹಾಸನದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿಸ್ ಪಕ್ಷದ ರಾಷ್ಟ್ರಾಧ್ಯಕ್ಷ ಹೆಚ್ಡಿ ದೇವೇಗೌಡ ಅವರು ಪಕ್ಷಕ್ಕೆ ಬರಮಾಡಿಕೊಂಡರು.
ಕಳೆದ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಪ್ರಮುಖ ಸಚಿವರಾಗಿದ್ದ ರೋಷನ್ ಬೇಗ್ ಅವರು ಬಹುಕೋಟಿ ಮೊತ್ತದ ಐಎಂಎ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಿಕೊಂಡಿದ್ದರು. ಅನಂತರ ಇವರನ್ನು ಸಿಐಡಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದರು.
ಜೈಲಿನಿಂದ ಬಿಡುಗಡೆಯಾಗಿ ಬಂದ ನಂತರ ಕಾಂಗ್ರೆಸ್ ಇವರಿಗೆ ಟಿಕೇಟ್ ನೀಡಿರಲಿಲ್ಲ. ಅನಂತರ ಇವರು ಬಿಜೆಪಿ ಸೇರುವ ಪ್ರಯತ್ನ ನಡೆಸಿದ್ದರು. ಆದರೆ, ಬಿಜೆಪಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ. ಇಂದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ನ ಮುಸ್ಲಿಂ ನಾಯಕ ಸಿ.ಎಂ ಇಬ್ರಾಹಿಂ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿ ರಾಜ್ಯಾಧ್ಯಕ್ಷ ಪದವಿಯನ್ನು ಅಲಂಕರಿಸಿದ್ದಾರೆ. ಇದೀಗ, ಜೆಡಿಎಸ್ಗೆ ಮತ್ತೊಬ್ಬ ಮುಸ್ಲಿಂ ನಾಯಕನ ಆಗಮನವಾಗಿದೆ.