ವೀರಯೋಧ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಇಂದು ಸಿದ್ದರಾಮಯ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದೆ.
ನ.22 ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದ ಭಯೋತ್ಪಾದರ ವಿರುದ್ಧದ ಕಾರ್ಯಾಚರಣೆ ವೇಳೆ ಪ್ರಾಂಜಲ್ ಹುತಾತ್ಮರಾಗಿದ್ದರು. ಜಿಲ್ಲಾಧಿಕಾರಿ ದಯಾನಂದ್ ಹುತಾತ್ಮ ಯೋಧನ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು.
ವೀರಮರಣವನ್ನಪ್ಪಿದ ಪ್ರಾಂಜಲ್ ರವರಿಗೆ ನಮನ ಸಲ್ಲಿಸಿದ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರಿಹಾರ ಧನ ಘೋಷಣೆ ಮಾಡಿದ್ದರು.ಇದೀಗ ನುಡಿದಂತೆಯೇ ನಡೆದುಕೊಂಡು ವೀರಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.