‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನೆಮಾದ ಮೊದಲ ಸಾಂಗ್ ಇಂದು ಲಹರಿ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ.
ಈಗಾಗಲೇ ಟ್ರೇಲರ್ ಹಾಗೂ ಫಸ್ಟ್ ಲುಕ್ನಿಂದ ಸಾಕಷ್ಟು ಸುದ್ದಿಯಾಗಿದ್ದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನೆಮಾದ ‘ನಿನ್ನನ್ನೇ ನಿನ್ನನ್ನೇ’ ಸಾಂಗ್ ಇಂದು ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ್ ಅವರು ಈ ಸಿನೆಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದರು.
ನಟನಾಗಿ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಭಾಸ್ಕರ್, ಇದೇ ಮೊದಲ ಬಾರಿಗೆ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಸಿನಿಮಾವಾಗಿದೆ.
ಮಗಳು ಜಾನಕಿ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ ರಾಕೇಶ್ ಮಯ್ಯು ಹಾಗೂ ಮೊದಲ ಬಾರಿಗೆ ಬಣ್ಣ ಹಚ್ಚಿರುವ ಮಧುನಂದನ್ ಎಪಿ ಮತ್ತು ನಾಯಕಿಯಾಗಿ ಪಾವನಿಯವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರದಲ್ಲಿ ನಟ ಅಚ್ಯುತ್ ಕುಮಾರ್, ರಾಘು ಶಿವಮೊಗ್ಗ, ಜಹಾಂಗೀರ್ ಅವರನ್ನು ಒಳಗೊಂಡಂತೆ ಹಲವು ಹಿರಿಯ ನಟರು ನಟಿಸಿದ್ದಾರೆ. ಸಚಿನ್ ಬಸ್ರೂರು ಅವರ ಸಂಗೀತ ಈ ಚಿತ್ರಕ್ಕಿದೆ.