ADVERTISEMENT
ಸಾಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಯಾರಿಗೆ ಬಿಜೆಪಿ ಟಿಕೆಟ್..? ಈಗಾಗಲೇ ಈ ಕ್ಷೇತ್ರದಿಂದ ಕಾಂಗ್ರೆಸ್ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ಘೋಷಿಸಿದೆ.
ಸಾಗರ ಕ್ಷೇತ್ರದಿಂದ ಈ ಬಾರಿ ಹೊಸಬರಿಗೆ ಟಿಕೆಟ್ ನೀಡಿ ಎನ್ನುವ ಕೂಗು ಬಿಜೆಪಿಯಲ್ಲಿ ಎದ್ದಿದೆ. ಹಾಲಿ ಶಾಸಕ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ನೀಡದಂತೆ ಪಕ್ಷದಲ್ಲೇ ಅಭಿಪ್ರಾಯ ವ್ಯಕ್ತವಾಗಿದೆ.
ಪ್ರಸನ್ನ ಅವರಿಗೆ ಸಿಗುತ್ತಾ ಬಿಜೆಪಿ ಟಿಕೆಟ್..?
ಬಿಜೆಪಿ ಪಕ್ಷದ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಆಗಿರುವ ಪ್ರಸನ್ನ ಕೆರೆಕೈ ಮೂಲತಃ ಹಿನ್ನೀರು ಭಾಗದವರು. ಅಂಬಾರಗೊಡ್ಲು ಕಳಸವಳ್ಳಿ ಸೇತುವೆಗಾಗಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು.
ಸಾಗರ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿದ್ದವರು. ರಾಜ್ಯ ಯೋಜನಾ ಆಯೋಗದ ಸದಸ್ಯರೂ ಆಗಿದ್ದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಸಹ ಪ್ರಭಾರಿಯಾಗಿ ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.
ಸಾಗರದಿಂದ ಹೊಸಬರಿಗೆ ಬಿಜೆಪಿ ಟಿಕೆಟ್ ಕೊಡಬೇಕು ಎನ್ನುವ ಕೂಗಿನ ಹಿನ್ನೆಲೆಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಇವರಿಗೆ ಟಿಕೆಟ್ ಕೊಡಬೇಕು ಎಂಬ ಬೇಡಿಕೆ ಜೋರಿದೆ.
ADVERTISEMENT