ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವಿತ್ರಾ ಗೌಡ ಬಗ್ಗೆ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ದರ್ಶನ್ ಪವಿತ್ರ ಗೌಡ ಸಂಬಂಧದ ಬಗ್ಗೆ ಆಗಾಗಾ ಸುದ್ದಿಯಾಗುತ್ತಲೇ ಇತ್ತು. ಇದೀಗ ಮತ್ತೆ ಈ ಜೋಡಿ ರಿಲೇಶನ್ ಶಿಪ್ ಕುರಿತು ಸುದ್ದಿಯೊಂದು ಹರಿದಾಡುತ್ತಿದ್ದು, ಸ್ವತ: ಪವಿತ್ರಾ ಗೌಡ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಜೊತೆ ಇರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಹೌದು ದರ್ಶನ್ ಒಟ್ಟಿಗಿನ ಹಲವು ಫೋಟೊಗಳನ್ನು ಸೇರಿಸಿ ಅದನ್ನು ವಿಡಿಯೋ ಮಾಡಿ ಇನ್ಸ್ಟಾಗ್ರಾಂನಲ್ಲಿ ಪವಿತ್ರ ಶೇರ್ ಮಾಡಿಕೊಂಡಿದ್ದು, ಇದರೊಂದಿಗೆ “ನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆ” ಎಂದು ಬರೆದುಕೊಂಡಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ಆ ಪೋಸ್ಟ್ ವೈರಲ್ ಆಗುತ್ತಿದ್ದು, ದರ್ಶನ್ ಪತ್ನಿ ವಿಜಿ ಫುಲ್ ಗರಂ ಆಗಿದ್ದಾರೆ.
ಇದನ್ನು ಕಂಡು ಗರಂ ಆಗಿರುವ ವಿಜಯಲಕ್ಷ್ಮಿ ದರ್ಶನ್ ಪವಿತ್ರಗೌಡ ಅವರ ಪತಿ ಸಂಜಯ್ ಸಿಂಗ್ ಮತ್ತು ಅವರ ಮಗಳ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ, ಅದು ಅವಳ ಪಾತ್ರ ಮತ್ತು ನೈತಿಕ ನಿಲುವಿನ ಬಗ್ಗೆ ಮಾತನಾಡುತ್ತದೆ. ಪುರುಷ ವಿವಾಹಿತನೆಂದು ತಿಳಿದಿದ್ದರೂ ಕೂಡ ತಮ್ಮ ವೈಯಕ್ತಿಕ ಅಗತ್ಯಗಳು ಮತ್ತು ಕಾರ್ಯಸೂಚಿಗಾಗಿ ಅವರೊಂದಿಗಿರುವುದನ್ನುಆಯ್ಕೆ ಮಾಡಿಕೊಳ್ಳುತ್ತಾಳೆ… ಈ ಚಿತ್ರಗಳು ಸ್ಪಷ್ಟವಾಗಿವೆ. ಕುಶಿ ಗೌಡ ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು …. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮವನ್ನು ತೆಗೆದುಕೊಳ್ಳುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಈ ಹಿಂದೆಯೇ ಪವಿತ್ರ ಗೌಡ ಅವರು ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ದರ್ಶನ್ ಜೊತೆಗಿರುವ ಫೋಟೊವನ್ನು ಕವರ್ ಪೇಜ್ನಲ್ಲಿ ಹಾಕಿಕೊಂಡಿದ್ದರು. ಈ ಫೋಟೋ ವೈರಲ್ ಕೂಡ ಆಗಿತ್ತು. ಜತೆಗೆ ದರ್ಶನ್, ನಟಿ ಪವಿತ್ರಾ ಗೌಡ ಕುರಿತು ಹಲವು ಸುದ್ದಿಗಳು ಹರಿದಾಡಿದ್ದವು