ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೆಪ್ಟೆಂಬರ್ 2ರಂದು ರಜೆ ಘೋಷಿಸಲಾಗಿದೆ.
ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ 2 ರಂದು ಗಣೇಶ ಚತುರ್ಥಿ ಶೋಭಾ ಯಾತ್ರೆ, ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಪದವಿ ಪೂರ್ವ ಐಐಟಿ ಸ್ನಾತಕೋತರ ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.