ನಾಳೆ ಹಿಜಬ್ ವಿವಾದ ಬಗ್ಗೆ ಹೈಕೋರ್ಟ್ ತೀರ್ಪು ಬರುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ನಾಳೆ ಅಂಗನವಾಡಿಗಳು, ಕಿರಿಯ ಪ್ರಾಥಮಿಕ ಶಾಲೆಗಳು, ಹಿರಿಯ ಪ್ರಾಥಮಿಕ ಶಾಲೆಗಳು, ಹೈಸ್ಕೂಲ್, ಪಿಯುಸಿ, ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಆದರೆ ನಾಳೆ ನಿಗದಿ ಆಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ.
ನಾಳೆ ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.