ADVERTISEMENT
ವಿಧಾನಸಭಾ ಚುನಾವಣೆ ಹತ್ತಿರವಾಗ್ತಿರುವಂತೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ಆಘಾತ ಎದುರಾಗಿದೆ.
ಕ್ರೀಡಾ ಸಚಿವ ಕೆ ಸಿ ನಾರಾಯಣಗೌಡ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದ್ದು, ಕಾಂಗ್ರೆಸ್ನಿಂದ ತಮಗೆ ಆಹ್ವಾನ ಬಂದಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರೋದು ನಿಜ. ಆದರೆ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆಪ್ತರು ಮತ್ತು ಹಿತೈಷಿಗಳ ಜೊತೆ ಚರ್ಚಿಸಿ ಅಭಿಪ್ರಾಯ ಕೇಳಬೇಕು. ಅವರ ಅಭಿಪ್ರಾಯ ಕೇಳಿದ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಮಾಡ್ತೇನೆ
ಕೆ ಆರ್ ಪೇಟೆಯಲ್ಲಿ ಕಾಂಗ್ರೆಸ್ಗೆ ನಾಯಕತ್ವದ ಕೊರತೆ ಇದೆ. ಅದಕ್ಕಾಗಿ ಪಕ್ಷಕ್ಕೆ ಬರುವಂತೆ ಒತ್ತಾಯ ಇದೆ
ಎಂದು ಕೆ ಸಿ ನಾರಾಯಣಗೌಡ ಅವರು ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದೇ ಕೆ ಆರ್ ಪೇಟೆಯಲ್ಲಿ.
2018ರಲ್ಲಿ ಜೆಡಿಎಸ್ನಿಂದ ಗೆದ್ದು 2019ರಲ್ಲಿ ಬಿಜೆಪಿ ಸೇರಿದ್ದ ನಾರಾಯಣಗೌಡ ಅವರು ಆ ಬಳಿಕ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿದ್ದರು. ಈ ಮೂಲಕ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಕಮಲ ಪತಾಕೆ ಹಾರಿತ್ತು.
ADVERTISEMENT