ಚಿಕ್ಕಮಗಳೂರು: ಶಂಕರಾಚಾರ್ಯರು ಸ್ಥಾಪಿಸಿದ ಶೃಂಗೇರಿ ಮಠದ ಶ್ರೀಗಳು ಅಯೋಧ್ಯೆಯಲ್ಲಿ (Ayodhya) ನಡೆಯುವ ರಾಮಮಂದಿರ (Ram Mandir) ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಠದ ಆಡಳಿತಾಧಿಕಾರಿ ಗೌರಿ ಶಂಕರ್ ಸ್ಪಷ್ಟಪಡಿಸಿದ್ದಾರೆ.
ಶೃಂಗೇರಿ ಮಠದ (Sringeri Mutt) ಇಬ್ಬರು ಗುರುಗಳಾಗಿರುವ ಭಾರತೀತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರ ಶ್ರೀಗಳು ಬಾಲ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಗೈರಾಗಲಿದ್ದು, ಮಠದ ಪ್ರತಿನಿಧಿಯಾಗಿ ಆಡಳಿತಾಧಿಕಾರಿ ಗೌರಿಶಂಕರ್ ಅಯೋಧ್ಯೆಗೆ ತೆರಳಲಿದ್ದಾರೆ. ಶೃಂಗೇರಿ ಜಗದ್ಗುರುಗಳು ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತಾರೆ ಅನ್ನೋದು ಸುಳ್ಳು ಸುದ್ದಿ ಇಬ್ಬರು ಗುರುಗಳು ಹೋಗುತ್ತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ, ಒಮ್ಮೆ ಗುರುಗಳು ಅಯೋಧ್ಯೆಯ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಸುಳ್ಳು ಸುದ್ದಿಯನ್ನ ಹರಿಬಿಡುತ್ತಾರೆ. ಮತ್ತೊಮ್ಮೆ ಗುರುಗಳು ಅಯೋಧ್ಯೆ ಕಾರ್ಯಕ್ರಮಕ್ಕೆ ತೆರಳುತ್ತಾರೆ ಎಂದು ಸಂದೇಶ ಹಾಕುತ್ತಾರೆ. ಇದು ಶುದ್ಧ ಸುಳ್ಳು. ಗುರುಗಳು ಅಯೋಧ್ಯೆಗೆ ಹೋಗುತ್ತಿಲ್ಲ. ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಗುರುಗಳು ಅಯೋಧ್ಯೆಗೆ ಹೋಗುತ್ತಿಲ್ಲ ಎಂದು ಮಠದ ಆಡಳಿತಾಧಿಕಾರಿಯವರು ಸ್ಪಷ್ಟಪಡಿಸಿದ್ದಾರೆ.