ಜುಲೈ ತಿಂಗಳಲ್ಲಿ ಸುರಿದ ಭಾರೀ ಮಳೆಗೆ ಭೂಕುಸಿತವಾದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಅಪಾಯದ ಸ್ಥಿತಿಯನ್ನು ಎದುರಿಸುತ್ತಿದೆ.
ಬೆಂಗಳೂರು-ಮಂಗಳೂರು ಹೆದ್ದಾರಿ 75 ರ ಹಾಸನ ಜಿಲ್ಲೆಯ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ರಸ್ತೆಗಳಲ್ಲಿ ಭಾರೀ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಹಾಸನ ಜಿಲ್ಲಾಧಿಕಾರಿಗಳು ಅಧಿಕಾರಿಗಳ ಪ್ರಸ್ತಾವನೆಯನ್ನು ಪರಿಗಣಿಸಿ ತಕ್ಷಣವೇ ಮುಂದಿನ ಆದೇಶದವರೆಗೂ ಶಿರಾಡಿ ಘಾಟ್ನಲ್ಲಿ ಎಲ್ಲಾ ರೀತಿಯ ವಾಹನಗಳ ರಸ್ತೆ ಸಂಚಾರ ನಿರ್ಬಂಧಿಸಿ ಆದೇಶಿಸಿದ್ದಾರೆ.
ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾದ ಕಾರಣ ಬದಲಿ ಮಾರ್ಗ ಕಲ್ಪಿಸಲಾಗಿದೆ. ಹೀಗಾಗಿ ಬೆಂಗಳೂರು, ಹಾಸನದಿಂದ ಆಗಮಿಸುವವರು ಈ ಬದಲಿ ಮಾರ್ಗವನ್ನು ಬಳಸಬಹುದಾಗಿದೆ. ಆದರೆ, 16,200 ಕೆ.ಜಿ.ಗಿಂತ ಹೆಚ್ಚು ತೂಕದ ಸರಕು ಸಾಗಣೆ ಮಾಡುವ ವಾಹನಗಳು ಈ ಎರಡು ಮಾರ್ಗಗಳನ್ನು ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ
ಮಂಗಳೂರು ತಲುಪಲು ಇರುವ ಇತರೆ ಮಾರ್ಗಗಳು :-
1. ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ- ಮಂಗಳೂರು ರಸ್ತೆ.
2. ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಘಾಟ್ ಮೂಲಕ ಮಂಗಳೂರು ರಸ್ತೆ.
ಶಿರಾಡಿ ಘಾಟ್ ಬಂದ್ ಆಗಿರುವುದರಿಂದ ಯಾವುದೇ ಕಾರಣಕ್ಕೂ ಈ ಮಾರ್ಗದಲ್ಲಿ ಸಂಚರಿಸಬಾರದು.
ತುರ್ತು ಕಾಮಗಾರಿ ನಡೆಯಬೇಕಿರುವುದರಿಂದ ಸದ್ಯ ಶಿರಾಡಿ ಘಾಟ್ ರಸ್ತೆ ಮುಚ್ಚಲಾಗಿದ್ದು, ಪರ್ಯಾಯ ಬದಲಿ ಮಾರ್ಗ ಕಲ್ಪಿಸಲಾಗಿದೆ.