ಶಿವಮೊಗ್ಗ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಸಿಗಂದೂರು ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಶರಾವತಿ ಹಿನ್ನೀರಿನಲ್ಲಿ ಸೇತುವೆ ನಿರ್ಮಾಣ ನಡೆಯುತ್ತಿದೆ.
ಸ್ಥಳಕ್ಕೆ ಭೇಟಿ ನೀಡಿ ಸೇತುವೆ ನಿರ್ಮಾಣ ಕುರಿತು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಅಲ್ಲದೇ ಲಾಂಚ್ನಲ್ಲಿ ಸಂಚರಿಸಿ ಖುದ್ದು ಸೇತುವೆ ಕಾಮಗಾರಿಯನ್ನು ವೀಕ್ಷಿಸಿದರು.
ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಈ ಸೇತುವೆ ನಿರ್ಮಿಸಲಾಗುತ್ತಿದ್ದು, ಶೇ.53ರಷ್ಟು ಕಾಮಗಾರಿ ಪೂರ್ಣಗೊಂಡಿದೆ.
ಆದರೆ ಭಾರೀ ಮಳೆಯಿಂದಾಗಿ ಹಿನ್ನೀರಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ.
ತ್ವರಿತಗತಿಯಲ್ಲಿ ಕಾಮಗಾರಿ ನಡೆಸಿ ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುಮಾರು 423 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಿಸುತ್ತಿದೆ.
ಈ ಭಾಗದ ಜನರ ಬಹು ಬೇಡಿಕೆಯಂತೆ ಸೇತುವೆ ನಿರ್ಮಾಣಕ್ಕೆ ಅನುಮೋದನೆ ಪಡೆಯುವಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಸಾಕಷ್ಟು ಶ್ರಮಿಸಿದ್ದಾರೆ.

ಈ ಸೇತುವೆ ನಿರ್ಮಾಣದಿಂದ ಸಿಗಂದೂರಿಗೆ ಬರುವ ಪ್ರವಾಸಿಗರ ಜೊತೆಗೆ ಮಂಗಳೂರು ಸೇರಿದಂತೆ ಹಲವೆಡೆ ತೆರಳುವವರಿಗೆ ಅನುಕೂಲವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ADVERTISEMENT
ADVERTISEMENT