ಶಿವಮೊಗ್ಗ ಮೂಲದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದೆ.
ಇದಕ್ಕೂ ಮುನ್ನ ಕರ್ನಾಟಕ ಪೊಲೀಸರು ಈ ಹತ್ಯೆ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದರು. ಫೆ.20 ರಂದು ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು.
ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಎಫ್ಐಆರ್ ದಾಖಲಿಸಿದೆ. ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಈಗಾಗಲೇ 10 ಮಂದಿಯನ್ನು ಬಂಧಿಸಿದ್ದು ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಹರ್ಷ ಶಿವಮೊಗ್ಗದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ನಿಷೇಧಕ್ಕೆ ಬೆಂಬಲ ಪಡೆಯಲು ಸಂಘಟನೆ ನಡೆಸುತ್ತಿದ್ದ. ಆದ್ದರಿಂದ ಆತನ ಹತ್ಯೆ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂದು ರಾಜ್ಯ ಪೊಲೀಸ್ ಅಧಿಕಾರಿಗಳು ಶಂಕಿಸಿದ್ದರು. ಶಂಕಿತ ಆರೋಪಿಗಳನ್ನು ಶೀಘ್ರವೇ ಎನ್ಐಎ ವಶಕ್ಕೆ ಪಡೆಯಲಿದೆ.
ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಕೇಂದ್ರ ರಾಜ್ಯ ಖಾತೆ ಸಚಿವೆ ಶೋಬಾ ಕರಂದ್ಲಾಜೆಯವರು ಹರ್ಷ ಕೊಲೆ ಪ್ರಕರಣವನ್ನು NIA ಗೆ ವರ್ಗಾಯಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು.