ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ (Shivamoorthy Shree) ಹೃದಯ ಸಂಬಂಧಿ ಖಾಯಿಲೆ ತಪಾಸಣೆಗೆ ನ್ಯಾಯಾಲಯ ಅನುಮತಿ ನೀಡಿದೆ.
ಶಿವಮೂರ್ತಿ ಮುರುಘಾ ಶ್ರೀಗಳಿಗೆ ಹೃದಯ ಸಂಬಂಧಿ ಖಾಯಿಲೆಯ ತಪಾಸಣೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.
ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಮಹಾದೇವಿ ಎಂ.ಮರಕಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಸೋಮವಾರ ಪ್ರಕಟಿಸಿದ್ದಾರೆ.
ಆರೋಪಿಯಾದ ಮುರುಘಾ ಶ್ರೀಗಳನ್ನು (Shivamoorthy Shree) ಇಂದು ಮಂಗಳವಾರ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಇದನ್ನೂ ಓದಿ : Chitradurga Murugha Matt : ಮುರುಘಾ ಮಠದಿಂದ ಇಬ್ಬರು ಬಾಲಕರು ನಾಪತ್ತೆ