ADVERTISEMENT
ಹಾಸನ ಟಿಕೆಟ್ ಹಂಚಿಕೆ ಕಗ್ಗಂಟಿನ ನಡುವೆ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ಗೆ ಬಹುದೊಡ್ಡ ಆಘಾತ. ಕೆ ಆರ್ ಪೇಟೆ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಜೆಡಿಎಸ್ ಟಿಕೆಟ್ ವಂಚಿತರಾಗಿರುವ ಬಿ ಎಲ್ ದೇವರಾಜು ಅವರು ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ.
ನಾಳೆ ಬಂಡಿಹೊಳೆ ದೇವರಾಜು ಅವರು ತಮ್ಮ ಬೆಂಬಲಿಗರು ಮತ್ತು ಆಪ್ತರ ತುರ್ತು ಸಭೆಯನ್ನು ಕರೆದಿದ್ದಾರೆ.
2019ರ ಉಪ ಚುನಾವಣೆಯಲ್ಲಿ ದೇವರಾಜು ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸೋತಿದ್ದರು. ಸಚಿವ ಕೆ ಸಿ ನಾರಾಯಣಗೌಡ ಅವರ ಎದುರು 9 ಸಾವಿರ ಮತಗಳ ಅಂತರದಿಂದ ಸೋತಿದ್ದರು.
ಆದರೆ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ತಾವು ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಹೆಚ್ ಟಿ ಮಂಜುನಾಥ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ಆದರೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡನೇ ಸ್ಥಾನದಲ್ಲಿದ್ದ ತಮಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದ್ದರ ವಿರುದ್ಧ ದೇವರಾಜು ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದರು.
ADVERTISEMENT