ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಆಯವ್ಯಯಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದಾರೆ.
ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ. ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.
ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು.
ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮೀಜಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಆಪೇಕ್ಷೆ.
ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ
ಎಂದು ಡಾ ಡಿ ವೀರೇಂದ್ರ ಹೆಗ್ಗಡೆಯವರು ಜುಲೈ 8ರಂದು ಬರೆದಿರುವ ಪತ್ರ ಜುಲೈ 12ರಂದು ಸಿಎಂ ಸಿದ್ದರಾಮಯ್ಯ ಸಚಿವಾಲಯಕ್ಕೆ ತಲುಪಿದೆ.
ADVERTISEMENT
ADVERTISEMENT