ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ವೀರಣ್ಣ ಅವರ ಮೇಲೆ ಹಾಗೂ ಇದಕ್ಕೆ ಪ್ರೋತ್ಸಾಹಿಸಿದ್ದಾರೆ ಎಂದು ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ಅವರ ಮೇಲೆ ದೂರು ದಾಖಲಿಸಲಾಗಿದೆ.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಕೊಲೆ ಬೆದರಿಕೆ ಇದೆ ಎಂದು ಕಾಂಗ್ರೆಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್ ಘಟಕ ದೂರು ನೀಡಿರುವ ಪ್ರತಿ ಪ್ರತಿಕ್ಷಣ ನ್ಯೂಸ್ಗೆ ಲಭ್ಯವಾಗಿದೆ.
ಜೂನ್ 30 ರಂದು ಖಾಸಗಿ ವಾಹಿನಿ ಪಬ್ಲಿಕ್ ಟಿವಿಯಲ್ಲಿ ನಡೆದ ಪೋನ್ ಇನ್ ಕಾರ್ಯಕ್ರಮದಲ್ಲಿ ಹತ್ಯೆಯ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಜೂನ್ 30 ರಂದು ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ದಾವಣೆಗೆರೆಯಿಂದ ಕರೆ ಮಾಡಿದ್ದ ವೀರಣ್ಣ ಎನ್ನುವವರು “ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಗುಂಡಿಕ್ಕಿ ಹೊಡೆದ್ರೆ ಇವರೆಲ್ಲ ತಣ್ಣಗಾಗ್ತಾರೆ” ಎಂದಿದ್ದರು. ಇವರ ಈ ಮಾತಿಗೆ ಆಕ್ಷೇಪ ವ್ಯಕ್ತಪಡಿಸದ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ಅವರು ಮತ್ತಷ್ಟು ಪ್ರೋತ್ಸಾಹಿಸಿದ್ದಾರೆ ಎಂದು ಕಾಂಗ್ರೆಸ್ ಘಟಕ ದಾಖಲಿಸಿದ ದೂರಿನಲ್ಲಿ ಹೇಳಲಾಗಿದೆ.
ಕೊಲೆ ಬೆದರಿಕೆ ಹಾಕಿದ ದಾವಣಗೆರೆಯ ವೀರಣ್ಣ, ಪ್ರೋತ್ಸಾಹಿಸಿದ ನಿರೂಪಕ ಅರುಣ್ ಬಡಿಗೇರ್ ಹಾಗೂ ಪಬ್ಲಿಕ್ ಟಿವಿ ಫೇಸ್ ಬುಕ್ ಪುಟದ ಆ್ಯಡ್ಮಿನ್ ವಿರುದ್ಧ ಕಾಂಗ್ರೆಸ್ ಘಟಕ ದೂರು ದಾಖಲಿಸಿದೆ.
ಈ ನೇರ ಫೋನ್ ಇನ್ ಕಾರ್ಯಕ್ರಮದ ತುಣುಕನ್ನು ವಾಹಿನಿ ಫೇಸ್ಬುಕ್ ಪುಟದಲ್ಲಿ ಹಂಚಿಕೊಂಡಿದೆ. ಇದನ್ನೇ, ಕಾಂಗ್ರೆಸ್ ಸಾಕ್ಷಿಯನ್ನಾಗಿ ಪೊಲೀಸರಿಗೆ ನೀಡಿದೆ.