ತಲೆಯ ಮೇಲೆ ಸ್ವಾಮೀಜಿಗಳು ಬಟ್ಟೆ ಹಾಕಲ್ವಾ..? ಅದೇ ರೀತಿ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಹಾಕಿಕೊಳ್ಳಲಿ ಎಂದು ತಾವು ನೀಡಿದ್ದ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.
ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ರಾಜಕೀಯ ವಿರೋಧಿಗಳ ಅಪಪ್ರಚಾರಕ್ಕೆ ಕೆಲವು ಮಾಧ್ಯಮಗಳು ಸಹಿತ ಸಾಥ್ ನೀಡಿರುವುದು ವಿಷಾದನೀಯ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸ್ಪಷ್ಠನೆ ನೀಡಿ ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ.
ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ.
ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ.
ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು. 4/4— Siddaramaiah (@siddaramaiah) March 25, 2022
ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.