ADVERTISEMENT
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಬ್ರಾಹ್ಮಣ ವಿದ್ಯಾರ್ಥಿಗಳಿಗೆ 5 ಕೋಟಿ 85 ಲಕ್ಷ ರೂಪಾಯಿಗಳಷ್ಟು ವಿದ್ಯಾರ್ಥಿವೇತನ ವಿತರಿಸಿದೆ.
ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
ಬ್ರಾಹ್ಮಣ ಮಂಡಳಿ ಮೂಲಕ ಸಾಂದೀಪನಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. 4,474 ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅವುಗಳಲ್ಲಿ 3,958 ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲಾಗಿತ್ತು.
ಕಳೆದ ವರ್ಷದ ಮಾರ್ಚ್ ಅಂತ್ಯಕ್ಕೆ 2 ಕೋಟಿ 41 ಲಕ್ಷ ರೂಪಾಯಿಯಷ್ಟು ಶಿಷ್ಯ ವೇತನ ಬಿಡುಗಡೆ ಮಾಡಲಾಗಿತ್ತು. ಡಿಸೆಂಬರ್ ಅಂತ್ಯಕ್ಕೆ ಬಾಕಿ ಉಳಿದಿದ್ದ 2,221 ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ 44 ಲಕ್ಷ ರೂಪಾಯಿಗಳನ್ನು ಶಿಷ್ಯ ವೇತನದ ರೂಪದಲ್ಲಿ ಬಿಡುಗಡೆ ಮಾಡಲಾಗಿದೆ.
ADVERTISEMENT