ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.
ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದರು.
ADVERTISEMENT
ADVERTISEMENT