ADVERTISEMENT
ಈ ಹಿಂದೆ ಹುಬ್ಲೋಟ್ ವಾಚ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಕ್ಕೆ ಈಡಾಗಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಯಲ್ಲಿ ಹೊಚ್ಚ ಹೊಸ RADO ವಾಚ್ ಕಾಣಿಸಿಕೊಂಡಿದೆ.
ಈ RADO ವಾಚ್ ಗಿಫ್ಟ್ ಕೊಟ್ಟಿದ್ದು ಯಾರು ಎಂಬುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರ ತಮ್ಮ ಸಂಪುಟ ಸಹೋದ್ಯೋಗಿಗಳಾದ ಡಿಸಿಎಂ ಪರಮೇಶ್ವರ್ ಮತ್ತು ಸಚಿವ ಎಂಬಿ ಪಾಟೀಲ್ ಅವರ ಬಳಿ ಖುಷಿಯಿಂದ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ನೂತನ ಕಟ್ಟಡ ಇಂದಿರಾ ಭವನದಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕುಳಿತಿದ್ದ ಸಿದ್ದರಾಮಯ್ಯ ಅವರು ಎಂಬಿ ಪಾಟೀಲ್ಗೆ ನೀಡಿದ ವಿವರಣೆ ಪ್ರಕಾರ, ಸಿದ್ದರಾಮಯ್ಯಗೆ RADO ವಾಚ್ ಗಿಫ್ಟ್ ನೀಡಿರುವುದು ಅವರ ಧರ್ಮಪತ್ನಿ ಪಾರ್ವತಿ ಅವರು. ಎರಡನೇ ಬಾರಿ ಮುಖ್ಯಮಂತ್ರಿ ಹುದ್ದೆಯನ್ನು ಸಿದ್ದರಾಮಯ್ಯ ಅಲಂಕರಿಸಿರುವ ಸಂದರ್ಭದಲ್ಲಿ ಅವರ ಪತ್ನಿ ಪಾರ್ವತಿ ಅವರು RADO ಕೈ ಗಡಿಯಾರವನ್ನು ಗಿಫ್ಟ್ ಮಾಡಿದ್ದಾರೆ.
ಈ ವಿಚಾರವನ್ನು ಕೇಳಿಸಿಕೊಂಡ ಸಚಿವ ಎಂಬಿ ಪಾಟೀಲ್, ನೀವು ಯಾವಾಗಲೂ ವಾಚ್ ಧರಿಸಿರಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ
ADVERTISEMENT