ಬಾದಾಮಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪ ಸಂಖ್ಯಾತರ ಇಲಾಖೆ ಹಾಗೂ ಸಾರಿಗೆ ಇಲಾಖೆಯಿಂದ ಕೈಗೊಳ್ಳುವ ಕಾಮಗಾರಿಗಳಿಗೆ ಸಿದ್ದರಾಮಯ್ಯ ಅವರು 64 ಕೋಟಿ ರೂ.ಗಳ ಅನುದಾನ ಕೋರಿದ್ದಾರೆ.
ಪತ್ರ ಬರೆದ ಬಳಿಕ ಮೊನ್ನೆ ದೂರವಾಣಿ ಮೂಲಕ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದರು.
ಸಿದ್ದರಾಮಯ್ಯನವರ ಪತ್ರಕ್ಕೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಹೊಳಬಸು ಶೆಟ್ಟರ್ ತಿಳಿಸಿದ್ದಾರೆ.