ಸಿರವಾರ ಪೊಲೀಸ್ ಠಾಣೆ ಪಿಎಸ್ಐ ಗೀತಾಂಜಲಿ ಶಿಂಧೆ ಅಮಾನತ್ತಾಗಿದ್ದಾರೆ. ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಆದೇಶಿಸಿದ್ದಾರೆ.
ಆರೋಪಗಳು ಏನು..?:
ಜಮೀನು ವಿವಾದವೊಂದರಲ್ಲಿ ಮಧ್ಯಪ್ರವೇಶಿಸಿದ್ದ ಗೀತಾಂಜಲಿ ಶಿಂಧೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಪತ್ರದಲ್ಲಿ ಪಿಎಸ್ಐ ಗೀತಾಂಜಲಿ ಹೆಸರು ಬರೆದಿಟ್ಟು ಯುವಕನೊಬ್ಬ ನಾಪತ್ತೆ ಆಗಿದ್ದ. ಜಮೀನು ವಿಚಾರದಲ್ಲಿ ಮೂರು ತಿಂಗಳಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದ.
ಈ ಹಿನ್ನೆಲೆಯಲ್ಲಿ ಸಿರವಾರ ಪೊಲೀಸ್ ಠಾಣೆಯಲ್ಲೇ ಪಿಎಸ್ಐ ಅವರ ವಿರುದ್ಧವೇ ಎಫ್ಐಆರ್ ದಾಖಲಾಗಿ ಆ ಯುವಕನನ್ನು ಪೊಲೀಸರು ಪತ್ತೆ ಹಚ್ಚಿದ್ದರು.
ಇದಲ್ಲದೇ ಬೈಕ್ ಮತ್ತು ಕುರಿ ಕಳ್ಳತನ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಬೈಕ್ ಮತ್ತು ಕುರಿಗಳನ್ನೂ ಮಾಲೀಕರಿಗೆ ವಾಪಸ್ ಕೊಟ್ಟಿಲ್ಲ ಎಂಬ ಆರೋಪವೂ ಪಿಎಸ್ಐ ಗೀತಾಂಜಲಿ ಅವರ ಮೇಲಿತ್ತು.
ಕರ್ತವ್ಯ ಲೋಪದ ಆಧಾರದಲ್ಲಿ ಪಿಎಸ್ಐ ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ.