ಕೊರೋನಾ ಸೋಂಕಿನಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದೇ ಜೂನ್ 2 ರಂದು ಸೋನಿಯಾ ಗಾಂಧಿಯವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.
ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿಯವರಿಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.
ಇದೇ ಜೂನ್ 23 ರಂದು ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ನೋಟಿಸ್ನಲ್ಲಿ ಹೇಳಲಾಗಿದೆ.