ಪಂಚರಾಜ್ಯಗಳಲ್ಲಿನ ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕ ಗಾಂಧಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿ ಆಗಿದೆ.
ನಾಳೆ ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಪದತ್ಯಾಗದ ಪ್ರಸ್ತಾಪ ಮುಂದಿಡಲಿದ್ದಾರೆ ಎಂದು ವರದಿ ಆಗಿದೆ.
ಮೂಲಗಳ ಪ್ರಕಾರ ರಾಜಸ್ಥಾನದ ಯುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ಗೆ ಪಕ್ಷದ ಚುಕ್ಕಾಣಿಯನ್ನು ನೀಡುವ ಸಾಧ್ಯತೆ ಇದೆ.
ಈ ಹಿಂದೆಯೂ ಗಾಂಧಿ ಪರಿವಾರದವರು ತಮ್ಮ ಗಾದಿಗಳಿಗೆ ರಾಜೀನಾಮೆ ನೀಡಿದ್ದಾರಾದರೂ ಆ ರಾಜೀನಾಮೆಯನ್ನು ಕಾರ್ಯಕಾರಿ ಸಮಿತಿ ತಿರಸ್ಕರಿಸಿತ್ತು. 2019ರಲ್ಲಿ ರಾಹುಲ್ ಗಾಂಧಿ 2019ರ ಲೋಕಸಭಾ ಚುನಾವಣಾ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿದ್ದರು.