ಪಂಚ ರಾಜ್ಯಗಳ ಚುನಾವಣಾ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಐದು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನು ವಜಾಗೊಳಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲುಲ್ಲು, ಉತ್ತರಾಖಂಡ್, ಗೋವಾ ಮತ್ತು ಮಣಿಪುರ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಟ್ವೀಟಿಸಿದ್ದಾರೆ.
ರಾಜೀನಾಮೆ ಮೂಲಕ ಪ್ರದೇಶ ಕಾಂಗ್ರೆಸ್ ಸಮಿತಿಗಳ ಪುನರ್ರಚನೆಗೆ ಅವಕಾಶ ಮಾಡಿಕೊಡುವಂತೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.
ಎರಡು ದಿನಗಳ ಹಿಂದೆ ನಡೆದಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಒಂದು ವೇಳೆ ಗಾಂಧಿ ಪರಿವಾರದವರು ರಾಜೀನಾಮೆ ಕೊಡುವುದರಿಂದ ಪಕ್ಷ ಉಳಿಯುವುದಾದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸೋನಿಯಾ ಗಾಂಧಿ ಹೇಳಿದ್ದರು. ಆದ್ರೆ ರಾಜೀನಾಮೆ ನೀಡದಂತೆಯೂ ಮತ್ತು ಸೋನಿಯಾ ಅವರೇ ಅಧ್ಯಕ್ಷರಾಗಿ ಮುಂದುವರೆಯುವAತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಆಗ್ರಹಿಸಿತ್ತು.