ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ರಾನಿಲ್ ಅವರಿಗೆ ಸುಪ್ರಿಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಜಯಂತ ಜಯಸೂರ್ಯ ಪ್ರತಿಜ್ಞಾವಿಧಿ ಬೋಧಿಸಿದರು.
ಶ್ರೀಲಂಕಾ ತೊರೆದು ಸಿಂಗಾಪುರಕ್ಕೆ ಹೋಗಿರುವ ಅಧ್ಯಕ್ಷ ಗೋಟಬಯ ರಾಜಪಕ್ಷ ಅವರು ಅಲ್ಲಿಂದಲೇ ಇ-ಮೇಲ್ ಮುಖಾಂತರ ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಸ್ಪೀಕರ್ ಮಹಿಂದಾ ಯಾಪರ್ ಅಬೆರ್ದನ ಅವರು ರಾಜೀನಾಮೆ ಪತ್ರ ಸ್ವೀಕರಿಸಿ ಅಂಗೀಕರಿಸಿದ್ದಾರೆ.
ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ರಾನಿಲ್ ವಿಕ್ರಮಸಂಘೆಯವರು, ದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಮೊದಲ ಆದ್ಯತೆ ಎಂದು ಹೇಳಿದ್ದಾರೆ.
ಜುಲೈ 19 ರಿಂದ ಶ್ರೀಲಂಕಾ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ಆರಂಭವಾಗಲಿದೆ. ಜುಲೈ 20 ರಂದು ಅಧ್ಯಕ್ಷರ ಆಯ್ಕೆಯಾಗುವುದು ಎಂದು ಸ್ಪೀಕರ್ ತಿಳಿಸಿದ್ದಾರೆ.