ADVERTISEMENT
ಕೆಲವೇ ಹೊತ್ತಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಇವತ್ತು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್ ಮಂಜುಶ್ರೀ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಈ ಬಾರಿ 4,41,910 ಮಂದಿ ಹುಡುಗರು ಮತ್ತು 4,28,058 ಹುಡುಗಿಯರು ಪರೀಕ್ಷೆ ಬರೆದಿದ್ದಾರೆ.
ಬೆಳಗ್ಗೆ 10.30ರಿಂದಲೇ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಲಭ್ಯವಾಗಲಿದೆ.
ಆನ್ಲೈನ್ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ನೋಡುವುದು ಹೇಗೆ..?
ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ.
ಹೋಮ್ ಪೇಜ್ನಲ್ಲಿ SSLC Results 2024 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಆಗ ಹೊಸ ಲಾಗಿನ್ ಪುಟವು ತೆರೆದುಕೊಳ್ಳುತ್ತದೆ.
ಬಳಿಕ ವಿದ್ಯಾರ್ಥಿಯ ಹಾಲ್ ಟಿಕೆಟ್ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸಿದರೆ ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ. ಫಲಿತಾಂಶವನ್ನು ವೆಬ್ಸೈಟ್ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬಹುದು.
ADVERTISEMENT