ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠಗಳನ್ನು ಕರ್ನಾಟಕದ ಶಾಲಾ ಪಠ್ಯಗಳಿಂದ ತೆಗೆದು ಹಾಕಲಾಗಿದೆ ಎಂಬ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನಿರ್ಧಾರ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಭಗತ್ ಸಿಂಗ್ ಅವರನ್ನು ಬಿಜೆಪಿಯು ಇಷ್ಟೊಂದು ದ್ವೇಷಿಸುವುದಕ್ಕೆ ಕಾರಣವೇನು? ಪಠ್ಯಪುಸ್ತಕದಿಂದ ಅವರ ಪಠ್ಯವನ್ನು ತೆಗೆಯುವ ನಿರ್ಧಾರವು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅವಮಾನವಾಗಿದೆ. ದೇಶವು ಇದನ್ನು ಸಹಿಸುವುದಿಲ್ಲ. ಬಿಜೆಪಿ ಸರಕಾರವು ತನ್ನ ನಿರ್ಧಾರವನ್ನು ಹಿಂಪಡೆಯಲೇಬೇಕು ಎಂದು ಆಗ್ರಹಿಸಿದ್ದಾರೆ.
बीजेपी के लोग अमर शहीद सरदार भगत सिंह जी से इतनी नफ़रत क्यों करते हैं?
स्कूल की किताबों से सरदार भगत सिंह जी का नाम हटाना अमर शहीद की क़ुर्बानी का अपमान है।
देश अपने शहीदों का ये अपमान बिल्कुल बर्दाश्त नहीं करेगा। BJP सरकार को ये फ़ैसला वापस लेना होगा।https://t.co/zbFG5EAtnT
— Arvind Kejriwal (@ArvindKejriwal) May 17, 2022
ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಕರ್ನಾಟಕ ಸರಕಾರದ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಭಗತ್ ಸಿಂಗ್ ವಿರುದ್ಧದ ಬಿಜೆಪಿಯ ದ್ವೇಷ ಹೆಚ್ಚಾಗುತ್ತಿದೆ. ಕಡಿಮೆ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ವಿಚಾರಗಳು ಯುವಕರಲ್ಲಿ ದೇಶಭಕ್ತಿ ಹೆಚ್ಚಿಸುತ್ತದೆ. ಜನರಲ್ಲಿ ದೇಶಭಕ್ತಿ ಜಾಗೃತಗೊಳ್ಳುವುದರಿಂದ ಭಯಗೊಂಡು ಬಿಜೆಪಿ ಈ ರೀತಿ ಮಾಡುತ್ತಿದೆ ಎಂದು ಹೇಳಿದ್ದಾರೆ.
शहीद ए आज़म भगत सिंह जी से BJP की नफरत सबके सामने आ गई
कम उम्र में देश के लिए जान देकर इंकलाब की लौ जलाने वाले सरदार भगत सिंह को पढ़ कर आज भी युवाओं में देशभक्ति की लहर दौड़ जाती है
देश भक्ति के इसी जज़्बे से डर के मारे BJP की रूह कांपती है https://t.co/QH4w764rcM
— Bhagwant Mann (@BhagwantMann) May 17, 2022
ಈ ನಡುವೆ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪರಿಷ್ಕೃತ ಕನ್ನಡ ಪಠ್ಯಪುಸ್ತಕದಲ್ಲಿ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ.