No Result
View All Result
ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಉಚ್ಛ ನ್ಯಾಯಾಲಯದ ಆದೇಶದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ಮಾಡುವುದಕ್ಕೆ ಸುಪ್ರೀಂಕೋರ್ಟ್ ಸಮ್ಮತಿಸಿದೆ.
ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ರಾಹುಲ್ ಅವರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಪೀಠದ ಎದುರು ಮನವಿ ಮಾಡಿದರು.
ಇದೇ ಶುಕ್ರವಾರ ಅಂದರೆ ಜುಲೈ 21ರಂದು ವಿಚಾರಣೆಗೆ ಕೋರ್ಟ್ ಒಪ್ಪಿಕೊಂಡಿದೆ.
ಮೇಲ್ಮನವಿಯಲ್ಲಿ ರಾಹುಲ್ ಅವರು ಎರಡು ಮನವಿಗಳನ್ನು ಮಾಡಿದ್ದಾರೆ.
ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು ಮೇಲ್ಮನವಿಯನ್ನು ವಜಾಗೊಳಿಸಿದ್ದ ಗುಜರಾತ್ ಉಚ್ಛ ನ್ಯಾಯಾಲಯದ ಆದೇಶವನ್ನು ತಡೆ ಹಿಡಿಯಬೇಕು.
ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿಯುವರೆಗೆ ಗುಜರಾತ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಮತ್ತು ದೋಷಿ ಎಂದು ನೀಡಲಾಗಿರುವ ಆದೇಶಕ್ಕೆ ತಡೆ ನೀಡಬೇಕು.
ಉಪ ಚುನಾವಣೆ ಘೋಷಿಸಬಹುದು:
ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡು 112 ದಿನಗಳಾಗಿವೆ ಮತ್ತು ಯಾವುದೇ ಕ್ಷಣದಲ್ಲಾದರೂ ಚುನಾವಣಾ ಆಯೋಗ ವಯನಾಡು ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಬಹುದು. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ರಿಂದ ಆರಂಭವಾಗಲಿದೆ ಮತ್ತು ಮಧ್ಯಂತರ ಪರಿಹಾರ ಸಿಗದೇ ಹೋದರೆ ಆ ಕಲಾಪಗಳಲ್ಲಿ ಭಾಗವಹಿಸುವ ಮತ್ತು ನನ್ನ ಪಕ್ಷ ಮತ್ತು ಕ್ಷೇತ್ರವನ್ನು ಪ್ರತಿನಿಧಿಸುವ ಅವಕಾಶದಿಂದ ವಂಚಿತನಾಗುತ್ತೇನೆ
ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ರಾಹುಲ್ ಗಾಂಧಿ ವಾದಿಸಿದ್ದಾರೆ.
No Result
View All Result
error: Content is protected !!