ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(Bengaluru Development Board)ದ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ಶುಕ್ರವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಕುಮಾರ್ ನಾಯ್ಕ್ ಅವರನ್ನು ಬಿಡಿಎ ನೂತನ ಆಯಕ್ತರಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ : ಬಿಡಿಎ ಬ್ರೋಕರ್ಸ್ಗಳಿಂದ ಅವ್ಯವಹಾರ : ಬೆಳ್ಳಂಬೆಳಿಗ್ಗೆ 9 ಕಡೆ ಎಸಿಬಿ ದಾಳಿ
ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಹಲವು ಜನರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಕಾರಣಕ್ಕೆ ರಾಜೇಶ್ ಗೌಡ ಅವರನ್ನು ಸುಪ್ರೀಂ ಕೋರ್ಟ್ ನಿನ್ನೆ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.
ಕೋರ್ಟ್ ಆದೇಶದ ಬಗ್ಗೆ ಅವಿಧೇಯತೆ ತೋರಿದ್ದಕ್ಕೆ ರಾಜೇಶ್ ಗೌಡ ಅವರನ್ನು ಪ್ರಾಧಿಕಾರದಿಂದ (Bengaluru Development Board) ವರ್ಗಾವಣೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕುಮಾರ್ ನಾಯ್ಕ್ ಅವರಿಗೆ ಹೆಚ್ಚುವರಿಯಾಗಿ ಬಿಡಿಎ ಆಯುಕ್ತರ ಹುದ್ದೆ ನೀಡಲಾಗಿದೆ.
ಇದನ್ನೂ ಓದಿ : Breaking News : ಲೋಕಾಯುಕ್ತಕ್ಕೆ 6 ವರ್ಷಗಳ ನಂತರ ‘ಹೈ ಪವರ್’ – ನಾಳೆಯಿಂದಲೇ ಕಣಕ್ಕೆ