ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕ ಸಂಬಂಧ ಸಮಿತಿ ರಚನೆ ಪರವಾಗಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ಈ ಮೂಲಕ ಸಿಇಸಿ ಮತ್ತು ಇಸಿಗಳ ನೇಮಕದಲ್ಲಿ ಕೇಂದ್ರ ಸರ್ಕಾರದ ಬಳಿ ಇದ್ದ ಅಧಿಕಾರ ಮೊಟಕಾಗಿದೆ.
ಪ್ರಧಾನಮಂತ್ರಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ಸಮಿತಿಯ ಶಿಫಾರಸ್ಸು ಆಧರಿಸಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಬೇಕು ಎಂದು ಸುಪ್ರೀಂಕೋರ್ಟ್ನ ಸಂವಿಧಾನಿಕ ಪೀಠ ಆದೇಶಿಸಿದೆ.
ಭಾರತದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ಇಲ್ಲಿಯವರೆಗೆ ಕೇಂದ್ರ ಸರ್ಕಾರವೇ ನೇಮಕ ಮಾಡುತ್ತಿತ್ತು.
ಸಿಬಿಐ, ಸಿವಿಸಿಗೆ ಮುಖ್ಯಸ್ಥರನ್ನು ನೇಮಕ ಮಾಡುವ ಸಮಿತಿಯ ರೀತಿಯಲ್ಲಿ ಇನ್ಮುಂದೆ ಹೊಸದಾಗಿ ರಚನೆ ಆಗುವ ಸಮಿತಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ನೇಮಕ ಮಾಡಲಿದೆ.
ಈ ಮೂಲಕ ಚುನಾವಣಾ ಆಯುಕ್ತರ ನೇಮಕದಲ್ಲಿ ಐತಿಹಾಸಿಕ ಬದಲಾವಣೆಗೆ ಸುಪ್ರೀಂಕೋರ್ಟ್ ತೀರ್ಪು ಸಾಕ್ಷಿಯಾಗಲಿದೆ.
ನ್ಯಾಯಮೂರ್ತಿ ಕೆ ಎಂ ಜೋಸೆಫ್, ಅಜಯ್ ರಸ್ತೋಗಿ, ನ್ಯಾಯಮೂರ್ತಿ ಅನಿರುದ್ಧ ಬೋಸ್, ನ್ಯಾಯಮೂರ್ತಿ ಹೃಷಿಕೇಶ್ ರಾಯ್, ನ್ಯಾಯಮೂರ್ತಿ ಸಿ ಟಿ ರವಿಕುಮಾರ್ ಅವರಿದ್ದ ಸಂವಿಧಾನಿಕ ಪೀಠ ಈ ಐತಿಹಾಸಿಕ ತೀರ್ಪು ನೀಡಿದೆ.
ADVERTISEMENT
ADVERTISEMENT