No Result
View All Result
ನೈಸ್ (ನಂದಿ ಇನ್ಫಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ NICE) ವಿರುದ್ಧ ನೀಡಿದ್ದ ಮಾನಹಾನಿಕರ ಹೇಳಿಕೆ ಪ್ರಕರಣ (Defamation Case)ದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (Ex PM H D Devegowda) ಅವರಿಗೆ ಸುಪ್ರೀಕೋರ್ಟ್ (Supreme Court Relief) ವಿನಾಯಿತಿ ನೀಡಿದೆ.
ಆದರೆ ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು (Public Figures) ಕಂಪನಿಗಳ ಘನತೆ-ಗೌರಕ್ಕೆ ಧಕ್ಕೆ ತರುವ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದರಿಂದ ದೂರ ಇರಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಮಾನಹಾನಿ ಭಾಗವಾಗಿ 2 ಕೋಟಿ ರೂಪಾಯಿ ಠೇವಣಿ (ನಷ್ಟ ಪರಿಹಾರ) ಜಮೆ ಮಾಡುವಂತೆ ಬೆಂಗಳೂರಿನ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆ ತಡೆಯಾಜ್ಞೆ ತೆರವು ಕೋರಿ ನೈಸ್ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿಲ್ಲ. ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.
10 ವರ್ಷಗಳ ಹಿಂದೆ ಟಿವಿ ಸಂದರ್ಶನದಲ್ಲಿ ದೇವೇಗೌಡರು ನೀಡಿದ್ದ ಹೇಳಿಕೆ ಮಾನಹಾನಿಕರವಾಗಿದೆ ಎಂದು ಹೇಳಿ ನೈಸ್ ಕಂಪನಿ ಬೆಂಗಳೂರಿನ ನ್ಯಾಯಾಲಯದಲ್ಲಿ (Bengaluru Court) ಮಾನನಷ್ಟ ಮೊಕದ್ದಮೆ ಹೂಡಿತ್ತು. 2021ರಲ್ಲಿ ನ್ಯಾಯಾಲಯವೂ ದೇವೇಗೌಡರಿಗೆ ಮಾನನಷ್ಟದ ಭಾಗವಾಗಿ 2 ಕೋಟಿ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಸೂಚಿಸಿತ್ತು.
ಆದರೆ ಫೆಬ್ರವರಿ 21,2022ರಲ್ಲಿ ಬೆಂಗಳೂರು ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ (Karnataka High Court) ತಡೆಯಾಜ್ಞೆ ನೀಡಿತ್ತು ಮತ್ತು ನೈಸ್ ಕಂಪನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡದಂತೆ ಹೈಕೋರ್ಟ್ ದೇವೇಗೌಡರಿಗೆ ಸೂಚಿಸಿತ್ತು.
ಪ್ರಭಾವಿ ಹುದ್ದೆಯಲ್ಲಿರುವ ವ್ಯಕ್ತಿಗಳು ನೀಡುವ ಹೇಳಿಕೆಗಳಿಗೆ ಕಾರ್ಪೋರೇಟ್ ಕಂಪನಿಗಳ ಹೂಡಿಕೆ, ಗೌರವ ಮತ್ತು ಷೇರುಗಳ ಮೇಲೆ ಪರಿಣಾಮ ಬೀರುತ್ತದೆ.
ನೀವು ಉತ್ತಮ ಯೋಜನೆ ಜಾರಿಗೊಳಿಸಿದ್ದೀರಿ. ಮೌಲ್ಯಯುತವಾದ ಹೂಡಿಕೆ ಮಾಡಿದ್ದೀರಿ. ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ಬೇಜವಾಬ್ದಾರಿ ಹೇಳಿಕೆ ನೀಡಿದಾಗ ಅದು ಕಂಪನಿಯ ಘನತೆ-ಗೌರವಕ್ಕೆ ಧಕ್ಕೆ ಉಂಟು ಮಾಡುತ್ತದೆ ಮತ್ತು ಷೇರು ಮೌಲ್ಯದ ಮೇಲೆ ಪರಿಣಾಮ ಬೀರುತ್ತದೆ
ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಸುಪ್ರೀಂಕೋರ್ಟ್ ಪೀಠ ನೈಸ್ ಪರ ವಕೀಲರಿಗೆ ಹೇಳಿತು.
1995ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ನೈಸ್ ಯೋಜನೆಗೆ ಅನುಮೋದನೆ ನೀಡಿದ್ದರು. ಈ ಯೋಜನೆಯನ್ನು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಎತ್ತಿಹಿಡಿದಿತ್ತು.
No Result
View All Result
error: Content is protected !!