ಲೋಕಸಭಾ ಚುನಾವಣೆ ಮುಂದಿರುವಂತೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಿಹಿಸುದ್ದಿ ಸಿಕ್ಕಿದೆ. ಅಕ್ರಮ ಆಸ್ತಿ ಗಳಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ವಿರುದ್ದ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಹೈಕೋರ್ಟ್ ಆದೇಶವನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಇಡಿ ದಾಖಲಿಸಿದ್ದ 120 ಬಿ ತನಿಖೆಯಿಂದ ಡಿ.ಕೆ. ಶಿವಕುಮಾರ್ ಅವರನ್ನು ಮುಕ್ತಗೊಳಿಸಿದೆ.
2017 ರಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ್ದ 14 ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಇ.ಡಿ 74.93 ಕೋಟಿ ರೂ. ಅಕ್ರಮ ಹಣವನ್ನು ವಶಪಡಿಸಿಕೊಂಡಿತ್ತು. ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ 14 ತಿಂಗಳು ಸೆರೆವಾಸವನ್ನೂ ಅನುಭವಿಸಿದ್ದರು.