ಮೈಸೂರಿನ ಮಠವೊಂದರಲ್ಲಿ ಸ್ವಾಮೀಜಿಯನ್ನು ಬರ್ಬರವಾಗಿ ಕೊಲೆಗೈಯ್ಯಲಾಗಿದೆ.
ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಹಾ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ (92) ಬರ್ಬರ ಹತ್ಯೆಯಾಗಿದ್ದಾರೆ. ಮಠದಲ್ಲಿ ಸ್ವಾಮೀಜಿ ಮಲಗಿದ್ದ ವೇಳೆ ಮಾರಕಾಸ್ತ್ರಗಳಿಂದ ಕೊಚ್ಚಿ ಸ್ವಾಮೀಜಿಯನ್ನು ಕೊಲೆ ಮಾಡಲಾಗಿದೆ.
ಇನ್ನು ಇದೇ ಮಠದಲ್ಲಿ ಕೆಲಸ ಮಾಡುತ್ತಿದ್ದ ಸ್ವಾಮೀಜಿಯ ಸಹಾಯಕ ರವಿ ಎಂಬಾತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಮದ್ಯ ಸೇವಿಸಿ ಮಠಕ್ಕೆ ಬಂದ ಆರೋಪಿ ರವಿ, ಮಲಗಿದ್ದ ಸ್ವಾಮೀಜಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಕೃತ್ಯವೆಸಗಿದ ಬಳಿಕ ಆತನೂ ವಿಷ ಸೇವಿಸಿ ಆತ್ಮಹತ್ಯೆಹೆ ಯತ್ನಿಸಿದ್ದಾನೆ ಅಂತ ಹೇಳಲಾಗ್ತಿದೆ.
ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಅಸ್ವಸ್ಥ ಆರೋಪಿಯನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
92ರ ಇಳಿ ವಯಸ್ಸಿನ ಸ್ವಾಮೀಜಿಯನ್ನು ಕೊಲೆ ಮಾಡುವಂತಹ ದ್ವೇಷ ಏನಿತ್ತು ಎಂಬುದರ ಕುರಿತಾಗಿ ಪೊಲೀಸರು ಈಗಾಗಲೇ ವಿಚಾರಣೆ ನಡೆಸಿದ್ದಾರೆ.
ADVERTISEMENT
ADVERTISEMENT