ಬೆಂಗಳೂರು ನಗರದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಈ ಬಾರಿಯೂ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿದೆ.
ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಅವರ ಪತ್ನಿ ಟಬು ರಾವ್ ಅವರು ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ಮತ್ತು ನಮಗೆ ಕುಟುಂಬದಂತಿರುವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು ಎಂದು ಟಬು ಅವರು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
ನಮಗೆ ಪ್ರೀತಿಪಾತ್ರರಾಗಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮತ್ತು ಕೆಟ್ಟ ಗಳಿಗೆಯಲ್ಲಿ ನಮಗೆ ಮಾರ್ಗದರ್ಶನ ನೀಡಿದ ಮತ್ತು ನಮ್ಮ ಜೊತೆಗೆ ನಿಂತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರಿಗೂ ಧನ್ಯವಾದಗಳು
ಎಂದು ಟಬು ರಾವ್ ಅವರು ಬರೆದುಕೊಂಡಿದ್ದಾರೆ.
ADVERTISEMENT
ADVERTISEMENT