ತಮಿಳುನಾಡಿನ ‘ವನ್ನಿಯಾರ್’ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ನೀಡಲಾಗಿದ್ದ ಶೇ.10.5 ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
ವನ್ನಿಯಾರ್ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, MBC ಗುಂಪಿನ 115 ಸಮುದಾಯಗಳಿಂದ ವನ್ನಿಯಾರ್ ಸಮುದಾಯವನ್ನು ವರ್ಗಿಕರಿಸಲು ಯಾವುದೇ ಗಣನೀಯ ಆಧಾರವಿಲ್ಲವೆಂದು ಅಭಿಪ್ರಾಯ ಪಟ್ಟಿದೆ.
ದೇಶದ ಬೇರೆ ಬೇರೆ ರಾಜ್ಯಗಳು ರಾಜ್ಯದಲ್ಲಿನ ಪ್ರಬಲ ಸಮುದಾಯಗಳಿಗೆ ನೀಡಿದ್ದ ಪ್ರತ್ಯೇಕ ಮೀಸಲಾತಿಯನ್ನು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ತಿರಸ್ಕರಿಸುತ್ತಿವೆ. ಕರ್ನಾಟಕ ರಾಜ್ಯದಲ್ಲಿಯೂ ಮೀಸಲಾತಿ ಬಗೆಗಿನ ಹೋರಾಟಗಳು ನಡೆಯುತ್ತಿವೆ. ರಾಜ್ಯದ ಕುರುಬ ಸಮುದಾಯ ತಮ್ಮನ್ನು ಪರಿಶಿಷ್ಟ ಪಂಗಡ (ST) ಕ್ಕೆ ಸೇರ್ಪಡೆ ಮಾಡಬೇಕೆಂದು, ಲಿಂಗಾಯತ ಸಮುದಾಯದ ಭಾಗವಾದ ಪಂಚಮಸಾಲಿ ಲಿಂಗಾಯತರು ತಮಗೆ 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕೆಂದು ಹಾಗೂ ST ಸಮುದಾಯ ತಮಗೆ 7.5 ಶೇ. ಮೀಸಲಾತಿ ಹೆಚ್ಚಿಸಬೇಕೆಂದು ಹೋರಾಟ ಮಾಡುತ್ತಿವೆ. ಸುಪ್ರೀಂಕೋರ್ಟ್ನ ಈ ತೀರ್ಪು ಕರ್ನಾಟಕ ರಾಜ್ಯ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.
https://youtu.be/MytNDW8fxFY