ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಸಂಬಂಧ ಲಖನೌ ಸೂಪರ್ ಜಯಂಟ್ಸ್ ನಾಯಕ ಕೆ.ಎಲ್ ರಾಹುಲ್ ಹಾಗೂ ಮುಂಬೈ ತಂಡದ ನಾಯಕ ಎಲ್ ರಾಹುಲ್ ಅವರಿಗೆ ದೊಡ್ಡ ಮೊತ್ತದ ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
2022ರ ಐಪಿಎಲ್ ಟೂರ್ನಿಯಲ್ಲಿ ನಿಧಾನಗತಿಯ ಓವರ್ ರೇಟ್ ಸಂಬಂಧ ಕೆ.ಎಲ್ ರಾಹುಲ್ ಪಾಲಿಗೆ ಇದು ಎರಡನೇ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ನಾಯಕನಿಗೆ 24 ಲಕ್ಷ ರೂ. ದಂಡ ಹಾಗೂ ತಂಡದ ಇನ್ನುಳಿದ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಸಂಭಾವನೆಯಲ್ಲಿ ಶೇ. 25 ರಷ್ಟು ದಂಡ ವಿಧಿಸಲಾಗುವುದು.
ಏಪ್ರಿಲ್ 24ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ 2022ರ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಕಾರಣ ಲಖನೌ ಸೂಪರ್ ಜಯಂಟ್ಸ್ ತಂಡಕ್ಕೆ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕ ಕೆ.ಎಲ್ ರಾಹುಲ್ ಜೊತೆಗೆ ಸೋತ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೂ ನಿಧಾನಗತಿಯ ಬೌಲಿಂಗ್ ಕಾರಣ 24 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ. ಕನಿಷ್ಠ ಓವರ್ಗಳ ಸಂಬಂಧ ಕೆ.ಎಲ್ ರಾಹುಲ್ ಮೂರನೇ ಅಪರಾಧವೆಸಗಿದರೆ, ಐಪಿಎಲ್ ನಿಯಮಗಳ ಪ್ರಕಾರ ಅವರಿಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯಕ್ಕೆ ನಿಷೇಧ ಹೇರಲಾಗುತ್ತದೆ.
ಇನ್ನು, ಮುಂಬೈ ಇಂಡಿಯನ್ಸ್ ತಂಡ ಭಾನುವಾರ ಆಡಿದ 8 ನೇ ಪಂದ್ಯದಲ್ಲಿಯೂ ಸತತ ಸೋಲನ್ನು ಅನುಭವಿಸಿದೆ.