ADVERTISEMENT
ಆಗಸ್ಟ್ 18ರಿಂದ ಶುರುವಾಗುವ ಜಿಂಬಾಬ್ವೆ (Zimbabwe) ವಿರುದ್ಧದ ಮೂರು ದಿನಗಳ ಏಕದಿನ ಸರಣಿಗಾಗಿ ಭಾರತ ಕ್ರಿಕೆಟ್ ತಂಡ (Team India) ಪ್ರಯಾಣ ಬೆಳೆಸಿದೆ.
ಟೀಂ ಇಂಡಿಯಾದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿರುವ ಚಿತ್ರಗಳನ್ನು ಬಿಸಿಸಿಐ (BCCI) ಹಂಚಿಕೊಂಡಿದೆ.
ಕೋಚ್ ವಿವಿಎಸ್ ಲಕ್ಷ್ಮಣ್ ಕೂಡಾ ಜೊತೆಗಿದ್ದಾರೆ.
ಆಗಸ್ಟ್ 18, 20 ಮತ್ತು 22ರಂದು ಹರಾರೆಯಲ್ಲಿ ಏಕದಿನ ಪಂದ್ಯ (ODI Series) ನಡೆಯಲಿದೆ.
ಆ ಬಳಿಕ ಆಗಸ್ಟ್ 27ರಿಂದ ಯುಎಇನಲ್ಲಿ ಏಷ್ಯಾ ಕಪ್ ಸರಣಿ ಆರಂಭ ಆಗಲಿದ್ದು, ಟೀಂ ಇಂಡಿಯಾ ಅಲ್ಲಿಗೆ ಪ್ರಯಾಣ ಬೆಳೆಸಲಿದೆ.
ಜಿಂಬಾಬ್ವೆ ಸರಣಿಗೆ ಟೀಂ ಇಂಡಿಯಾ:
ಕೆ ಎಲ್ ರಾಹುಲ್, ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶಾನ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಥಾಕೂರ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್
ADVERTISEMENT