ತೆಲಂಗಾಣದ ಹೊಸ ಮುಖ್ಯಮಂತ್ರಿಯಾಗಿ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇವತ್ತು ಹೈದರ್ಬಾದ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರೇವಂತ್ ರೆಡ್ಡಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಮೂಲಕ ಇದೇ ಮೊದಲ ಬಾರಿಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಕರ್ನಾಟಕ ಪ್ರದೇಶ ಸಮಿತಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಶಾಸಕರ ಸಭೆ ನಡೆಯಿತು.