ತೆಲಂಗಾಣದ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ಅವರು ಇಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ದೇವೇಗೌಡ ಅವರ ಮನೆಯಲ್ಲಿ ಹೆಚ್ಡಿ ದೇವೇಗೌಡ ಹಾಗೂ ತೆಲಂಗಾಣದ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ಮಾತುಕತೆ ನಡೆಸಿದ್ದಾರೆ. ಈ ವೇಳೆ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯವರು ಉಪಸ್ಥಿತರಿದ್ದರು.
ಕೆಸಿಆರ್ ಅವರು ದೇಶಾದ್ಯಂತ ಮುಂದಿನ ಲೋಕಸಭೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಹೊರತಾಗಿ 3 ನೇ ತೃತೀಯ ರಂಗ ರಚನೆ ಮಾಡಲು ಶ್ರಮಪಡುತ್ತಿದ್ದಾರೆ.
ಈಗಾಗಲೇ ದೇಶದ ಹಲವು ಪ್ರಮುಖ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರೊಂದಿಗೆ ಕೆಸಿಆರ್ ಅವರು ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ.