ಕಿರುತೆರೆ ಕಲಾವಿದ ಮಂಡ್ಯ ರವಿ (Mandya Ravi) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ರವಿ ತಂದೆ ಮುದ್ದೇಗೌಡ ಅವರು, ನನ್ನ ಮಗ ಸತ್ತಿಲ್ಲ. ಅವನ ಸ್ಥಿತಿ ತುಂಬಾನೇ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಮಂಡ್ಯ ರವಿ (Mandya Ravi) ಜಾಂಡೀಸ್ನಿಂದ ಬಳಲುತ್ತಿದ್ದಾರೆ. ಜೊತೆಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ. ಅವರ ಸ್ಥಿತಿ ಗಂಭೀರ ಆಗಿರುವ ಕಾರಣ ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಬಾಲಿವುಡ್ ನಟ ಮಿಥಿಲೇಶ್ ಚತುರ್ವೇದಿ ಇನ್ನಿಲ್ಲ