ದೆಹಲಿ: ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆಯನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿಯಲ್ಲಿ ಐದು ವರ್ಷಗಳ ಕಾಲ ‘ಕಾನೂನುಬಾಹಿರ ಸಂಘ’ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಭಯೋತ್ಪಾದನೆ ವಿರುದ್ಧ ಹೋರಾಡುವ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಇದನ್ನು ಮತ್ತಷ್ಟು ಬಲಪಡಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಲಾಗಿದೆ. ಭಾರತದ ಸಾರ್ವಭೌಮತೆ, ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಲು ಭಯೋತ್ಪಾದನೆ, ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ ತೊಡಗಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ಎಕ್ಸ್ನಲ್ಲಿ ತಿಳಿಸಿದೆ.
Bolstering PM @narendramodi Ji's vision of zero tolerance against terrorism ‘Students Islamic Movement of India (SIMI)’ has been declared as an 'Unlawful Association' for a further period of five years under the UAPA.
The SIMI has been found involved in fomenting terrorism,…— गृहमंत्री कार्यालय, HMO India (@HMOIndia) January 29, 2024